ಮಾಸ್ಕ್‌ ಹಾಕ್ಬೇಕು ಎಂದು ನನಗೆ ಅನಿಸಿಲ್ಲ, ಅದಕ್ಕೆ ಹಾಕಿಲ್ಲ: ಸಚಿವ ಕತ್ತಿ ಉಡಾಫೆ ಹೇಳಿಕೆ

posted in: ರಾಜ್ಯ | 0

ಬೆಳಗಾವಿ: ಕೊರೊನಾ ಸೋಂಕು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಅದಕ್ಕೆ, ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಸಚಿವ ಉಮೇಶ್‌ ಕತ್ತಿ ಹೇಳಿದರು.
ಅಥಣಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗಿದೆ. ಎರಡು ದಿನದ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್ ಧರಿಸುವುದು ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ನನಗೆ ಮಾಸ್ಕ್‌ ಧರಿಸಬೇಕು ಎಂದು ಅನಿಸಿಲ್ಲ, ನಾನು ಮಾಸ್ಕ್ ಧರಿಸಿಲ್ಲ ಎಂದು ಹೇಳಿದ್ದಾರೆ.
ರೈತರು ಶ್ರೀಗಂಧ ಬೆಳೆಯುವುದಕ್ಕೆ ಅರಣ್ಯ ಇಲಾಖೆಯಿಂದ ಕೆಲವು ನಿಯಮಗಳನ್ನು ಸಡಿಲ ಮಾಡಲಾಗಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಅದನ್ನು ತರಬೇಕೆಂದು ಅರಣ್ಯ ಇಲಾಖೆ ಯೋಜನೆಯನ್ನು ರೂಪಿಸಿದೆ, ಇದರಿಂದ ಮತ್ತಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹೈಡ್ರಾಮಾ ಮಾಡಿದ ವಧು...!
advertisement

ನಿಮ್ಮ ಕಾಮೆಂಟ್ ಬರೆಯಿರಿ