ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಅಗತ್ಯವಿಲ್ಲ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಆರಂಭಿಸಿರುವ ವಾರಾಂತ್ಯ ಕರ್ಫೂ ಅಗತ್ಯವಿಲ್ಲ ಎಂದು ನನಗನಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ರಾಜ್ಯದ ಆರ್ಥಿಕತೆಯೂ ಕೂಡಾ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹಾಗಾಗಿ ಸರ್ಕಾರ ನೋಡಿಕೊಂಡು ವೀಕೆಂಡ್ ಕರ್ಫ್ಯೂ ಕುರಿತು ತೀರ್ಮಾನ ಮಾಡಬೇಕು ಎಂದು ಅವರು ಹೇಳಿದರು.
ವಾರಾಂತ್ಯ ಕರ್ಫೂನಿಂದ ಸಾಕಷ್ಟು ಅರ್ಥಿಕ ಸಂಕಷ್ಟ ಸೃಷ್ಟಿಯಾಗಿದೆ. ಅರ್ಥಿಕ ವಹಿವಾಟು ನಡೆಯುವಂತಾಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಾರಾಂತ್ಯ ಕರ್ಫೂ ಸಡಿಲಿಕೆ ಬಗ್ಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದರು.
ಗಣರಾಜ್ಯೋತ್ಸವ ಪರೇಡ್‌ಗೆ ಕೇರಳ ಸರ್ಕಾರ ಕಳಿಸಿದ್ದ ನಾರಾಯಣ ಗುರುಗಳ ಸ್ತಬ್ದ ಚಿತ್ರ ರಿಜೆಕ್ಟ್ ಮಾಡಲಾಗಿದೆ ಎನ್ನುವ ಬಗ್ಗೆ ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ ಅವರು, ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಕೇರಳ ಕೆಲವು ಮಾರ್ಗಸೂಚಿಗಳನ್ನು ಪೂರ್ತಿ ಮಾಡಿರಲಿಲ್ಲ. ಅದರಿಂದಾಘಿ ಅದಕ್ಕೆ ಸಂಬಂಧಪಟ್ಟ ಆಯ್ಕೆ ಸಮಿತಿ ಅದನ್ನು ತಿರಸ್ಕರಿಸಿದೆ ಎಂದು ತಿಳಿಸಿದರು.
ಈಗಾಗಲೇ ನಾವು ನಾಲ್ಕು ರಾಜ್ಯದಲ್ಲಿ ಅಧಿಕಾರದಲ್ಲಿದ್ದೇವೆ. ನಾಲ್ಕು ರಾಜ್ಯಗಳಲ್ಲಿ ನಮ್ಮ ಪರ ಅಲೆಯಿದೆ ಎಂದ ಪ್ರಹ್ಲಾದ್ ಜೋಶಿ ಹೇಳಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement