ವಿವಾದಾತ್ಮಕ ಹೇಳಿಕೆ: ರಿಷಿಕುಮಾರ ಸ್ವಾಮಿ ಬಂಧನ

ಮಂಡ್ಯ: ಶ್ರೀರಂಗಪಟ್ಟಣದ ಮಸೀದಿಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರಿಷಿಕುಮಾರ ಸ್ವಾಮೀಜಿ ಅವರನ್ನು ಪೊಲೀಸರು ಇಂದು (ಸೋಮವಾರ) ಬೆಳಿಗ್ಗೆ ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ಕುರಿತು ವಿವಾದಿತ ಹೇಳಿಕೆ ನೀಡಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಚಿಕ್ಕಮಗಳೂರಲ್ಲಿ ಋಷಿ ಕುಮಾರ ಸ್ವಾಮೀಜಿ ಅವರನ್ನು ಬಂಧಿಸಿದ್ದಾರೆ.
ಪೊಲೀಸರು ಶ್ರೀರಂಗಪಟ್ಟಣ ಠಾಣೆಗೆ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement