ಸಾಹಿತಿ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ಕಂಬಾರ ನಿಧನ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ಕಂಬಾರ (76) ಇಂದು, ಸೋಮವಾರ ಬೆಳಿಗ್ಗೆ ನಿಧನರಾದರು.
ಸತ್ಯಭಾಮ ಅವರುಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಜನವರಿ 3ರಂದು ಸತ್ಯಭಾಮ ಆಸ್ಪತ್ರೆಗೆ ದಾಖಲಾಗಿದ್ದರು.
ಸತ್ಯಭಾಮ ಚಂದ್ರಶೇಖರ ಕಂಬಾರ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಬೊಮ್ಮಾಯಿ ಕಂಬನಿ ಮಿಡಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement