ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.. ಪ್ರಾಯೋಗಿಕ ಪರೀಕ್ಷೆಗೂ ದಿನಾಂಕ ನಿಗದಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22 ನೇ ಸಾಲಿನ ದ್ವೀತಿಯ ಪಿಯುಸಿ (Second PUC)ಯ ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದೆ. ಏಪ್ರಿಲ್​ 14 ಗಣಿತ, ಏಪ್ರಿಲ್​ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏಪ್ರಿಲ್ 22 ತರ್ಕಶಾಸ್ತ್ರ, ಏ.23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ ಪರೀಕ್ಷೆ ನಡೆಲಿದೆ.

ಏ.26ರಂದು ಹಿಂದಿ, ಏಪ್ರಿಲ್​​ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​, ಮೇ 2ರಂದು ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ, ಮೇ 4ರಂದು ಇಂಗ್ಲಿಷ್​​ ವಿಷಯದ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು 01-02-2022ರ ವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು [email protected] ಇ-ಮೇಲ್ ಗೆ ಕಳಿಸುವಂತೆ ತಿಳಿಸಲಾಗಿದೆ.
ಭಾಷಾಯ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದು, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮಗಳನ್ನು ಕಡಿತಗೊಳಿಸಿದ್ದು, ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲ. ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳು ನಡೆಯಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸಲು ಅವಕಾಶ ಕಲ್ಪಿಸಲಾಗಿದೆ.
2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ, ದಿನಾಂಕ 28-03-2022 ರಿಂದ 13-04-2022ರ ವರೆಗೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ಪ್ರಥಮ ಪಿಯುಸಿ ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇ.30ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಕಡಿತಗೊಳಿಸಲಾಗಿದೆ. ಐಚ್ಛಿಕ ವಿಷಯಗಳಲ್ಲಿ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಓದಿರಿ :-   ಮಾರಣಾಂತಿಕ ಅನಿಲವಿದೆ, ಬೆಂಕಿಕಡ್ಡಿ ಹಚ್ಚಬೇಡಿ...: ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪುತ್ರಿಯರಿಂದ ಚಿಲ್ಲಿಂಗ್ ನೋಟ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ