ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ

ಬೆಂಗಳೂರು: ಜನವರಿ ಕೊನೆಯಲ್ಲಿ ಕೊರೊನಾ ಸೋಂಕು ಗರಿಷ್ಠಮಟ್ಟಕ್ಕೆ ಹೋಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ದಿನಕ್ಕೆ 1 ಲಕ್ಷ ಪ್ರಕರಣಗಳು ವರದಿಯಾಗಬಹುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ.
ಜನವರಿ ಅಂತ್ಯದಲ್ಲಿ ದೈನಂದಿನ 1 ಲಕ್ಷ ಪ್ರಕರಣದ ವರೆಗೂ ವರದಿಯಾಗಬಹುದು ಎಂದು ತಜ್ಞರ ವರದಿ ಇದೆ, ತಜ್ಞರ ವರದಿಯ ಹಾಗೆಯೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜನವರಿ ಅಂತ್ಯದಲ್ಲಿ ಪ್ರಕರಣ ಹೆಚ್ಚಳವಾದರೆ ಫೆಬ್ರವರಿ 2 ಅಥವಾ ಮೂರನೇ ವಾರದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಏರಿದಷ್ಟೇ ವೇಗವಾಗಿ ಸೋಂಕು ಪ್ರಕರಣಗಳು ಇಳಿಯಬಹುದು. ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಇಂದು ಕೊರೊನಾ ದಿಢೀರ್‌ ಏರಿಕೆ ಉಂಟಾಗಿದೆ. ಹೊಸದಾಗಿ 41,457 ಮಂದಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,85,872 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 25,595 ಸೇರಿದಂತೆ ಕರ್ನಾಟಕದಲ್ಲಿ 41,457 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಪಾಸಿಟಿವಿಟಿ ದರ ಶೇ.22ರಷ್ಟು ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement