ಬೆಳಗಾವಿ: ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮಹಿಳೆ ಮೇಲೆ ಶೂಟೌಟ್ ನಡೆಸಿದ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಈ ಸಂಬಂಧ ಬಿಜೆಪಿ ಪುರಸಭೆ ಸದಸ್ಯನನ್ನು ಬಂಧಿಸಿದ್ದಾರೆ.
ಸಂಕೇಶ್ವರ ವಾರ್ಡ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ ಕಾಂಬಳೆ ಬಂಧಿತ ಆರೋಪಿ. ಜನವರಿ 16ರಂದು ನಾಡ ಪಿಸ್ತೂಲಿನಿಂದ ಶೈಲಾ ನಿರಂಜನ ಸುಭೇದಾರ (56) ಎಂಬ ಮಹಿಳೆಯನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಪ್ರಕರಣ ಬೆನ್ನತ್ತಿದ ಸಂಕೇಶ್ವರ ಠಾಣೆಯ ಪಿಎಸ್ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಹವಾಲ್ದಾರ ಭೀಮಪ್ಪ ನಾಗನೂರ, ಬಸವರಾಜ ಕಪರಟ್ಟಿ ಅವರನ್ನೊಳಗೊಂಡ ತನಿಖಾ ತಂಡವು ಈ ಹತ್ಯೆಯ ಜಾಡು ಹಿಡಿದು ಹೋದಾಗ ಹಣಕಾಸಿ ವ್ಯವಹಾರಕ್ಕೆ ಸಂಬಂಧಿಸಿದ ಹತ್ಯೆ ಎಂಬುದು ಗೊತ್ತಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ ಆರೋಪಿ ಉಮೇಶ ಕಾಂಬಳೆ 25 ಲಕ್ಷ ರೂ. ಹಣವನ್ನು ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದುರಿಗಿಸುವಂತೆ ಶೈಲಜಾ ಸುಭೇದಾರ ಒತ್ತಾಯಿಸುತ್ತಿದ್ದ ಕಾರಣ, ಮಹಾರಾಷ್ಟ್ರದ ಸಾಂಗಲಿಯಿಂದ ನಾಡ ಪಿಸ್ತೂಲ್ ತಂದು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ. ಕಂಟ್ರಿ ಪಿಸ್ತೂಲ್ ಸೇರಿದಂತೆ ಕೆಲವು ಮಹತ್ವದ ದಾಖಲೆಗಳನ್ನು ಪೊಲೀಸ್ ತನಿಖಾ ತಂಡ ವಶಕ್ಕೆ ಪಡೆದಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ