ನಲಪಾಡ್ ಹಲ್ಲೆ ಮಾಡಿದ್ದಾರೆಂಬುದು ಕಪೋಕಲ್ಪಿತ ಸುದ್ದಿ: ಈಶ್ವರ ಖಂಡ್ರೆ

posted in: ರಾಜ್ಯ | 0

ಬೆಂಗಳೂರು : ಸಿದ್ದು ಹಳ್ಳೇಗೌಡ ಮೇಲೆ ನಲಪಾಡ್ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.ಅವರು ಇದೊಂದು ಕಪೋಕಲ್ಪಿತ ಸುದ್ದಿ, ಇದರಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ನಲಪಾಡ್ ಯಾರ ಮೇಲೂ ಹಲ್ಲೆ ಮಾಡಿಲ್ಲ, ಹಲ್ಲೆ ಸಂಬಂಧ ಯಾರಾದಾರೂ ದೂರು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಅವರು, ನಾನು ಅಲ್ಲಿಗೆ ಹೋಗಿಯೇ ಇಲ್ಲ ಎಂದು ಸಿದ್ದು ಹಳ್ಳೇಗೌಡ ಹೇಳಿದ್ದಾರೆ. ಇದೆಲ್ಲ ಕಪೋಲ ಕಲ್ಪಿತ ಸುದ್ದಿ. ಗಲಾಟೆ ನಡೆದಿದೆ ಎಂದು ಗೃಹ ಸಚಿವರು ಹೇಳಿರುವುದು ಕಪೋ ಕಲ್ಪಿತವಾದ ಸುದ್ದಿ ಎಂದು ಹೇಳಿದ್ದಾರೆ. ಖಚಿತ ಮಾಹಿತಿ ಇದ್ದರೆ ಈ ಬಗ್ಗೆ ಯಾರಾದರೂ ಪ್ರಕರಣ ದಾಖಲು ಮಾಡಿದ್ದಾರಾ. ಎಂದು ಪ್ರಶ್ನಿಸಿದ್ದಾರೆ. ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ನಡೆಸಿದ್ದಾರೆಂದು ಸುದ್ದಿಯಾಗಿತ್ತು. ಈಗಾಗಲೇ ಸಿದ್ದು ಹಳ್ಳೇಗೌಡ ಅವರು ಇದೊಂದು ಇದು ಸುಳ್ಳು ಸುದ್ದಿ, ನನಗೆ ಯಾವುದೇ ಗಾಯಗಳಾಗಿಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಮಾಡಿರುವ ಷಡ್ಯಂತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಓದಿರಿ :-   ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಆಯ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ