ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

posted in: ರಾಜ್ಯ | 0

ಹುಬ್ಬಳ್ಳಿ: 2022 ನೇ ಸಾಲಿನ ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜನವರಿ 19ರಿಂದ ಪ್ರಾರಂಭವಾಗಿದೆ.
ವಿಕಲಚೇತನರ ಹೊಸ/ನವೀಕರಣ ಪಾಸ್‌ಗಳನ್ನು ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವಿಭಾಗ ಹಾಗೂ ಘಟಕ ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ ಸ್ವೀಕೃತಿಯನ್ನು ನಿಗದಿತ ಕಾಲಮಿತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಸಂಬಂಧಪಟ್ಟ ಪಾಸ್ ಕೌಂಟರ್‌ಗಳಲ್ಲಿ ಸಲ್ಲಿಸಿ ವಿಕಲಚೇತನರ ಬಸ್ ಪಾಸ್‌ ಪಡೆಯಬಹುದಾಗಿದೆ. ನಾಗರಿಕರು ಸಂಸ್ಥೆಯ ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ, ಡಿಕೆಶಿ ಸೇರಿ 29 ನಾಯಕರಿಗೆ ಕೋರ್ಟ್​ ಸಮನ್ಸ್
advertisement

ನಿಮ್ಮ ಕಾಮೆಂಟ್ ಬರೆಯಿರಿ