ಕವಿ ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರದ ನಿರ್ಧಾರ

ಹುಬ್ಬಳ್ಳಿ:  ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜ್ವರದಿಂದ ಬಳಲುತ್ತಿರುವ ಚನ್ನವೀರ ಕಣವಿ ಜನವರಿ ೧೪ ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡುತ್ತಿರುವುದು ತಿಳಿದುಬಂದಿದೆ. ಕಣವಿ ಅವರು ಕರ್ನಾಟಕದ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಅವರು ರಾಜ್ಯದ ಬೌದ್ಧಿಕ ಸಂಪತ್ತು ಎಂದು ಹೇಳಿದ್ದಾರೆ.
ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪತ್ರ ಬರೆದಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement