ಗಮನಿಸಿ…ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಫೆಬ್ರವರಿ 21ರಿಂದ 26ರ ವರೆಗೆ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ನಿಗದಿತ ದಿನದಂದು ಪರೀಕ್ಷೆ ಬೆಳಿಗ್ಗೆ 10:30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಕೋವಿಡ್ ನಿಯಮಗಳ ಅನುಸಾರವಾಗಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಫೆಬ್ರವರಿ 2022ರ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯವೇಳಾಪಟ್ಟಿ ಈ ಕೆಳಗಿನಂತಿದೆ.

*ಫೆಬ್ರವರಿ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ

*ಫೆ.22: ಸಮಾಜ ವಿಜ್ಞಾನ

*ಫೆ.23: ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ

ಫೆ.24: ಗಣಿತ

ಫೆ.25: ತೃತೀಯ ಭಾಷೆಯಾಗಿ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

ಫೆ.26ರಂದು ವಿಜ್ಞಾನ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement