ಮುಗಿಯದ ಯೂತ್ ಕಾಂಗ್ರೆಸ್‌ ಗಲಾಟೆ: ನಲಪಾಡ್ ವಿರುದ್ಧ ಕೇಳಿಬಂದ ಹಲ್ಲೆ ಆರೋಪ

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ವಿರುದ್ಧ ಈಗ ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಹಾಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ರಕ್ಷಾ ರಾಮಯ್ಯ ಅಧಿಕಾರವು ಜನವರಿ 30 ರಂದು ಮುಕ್ತಾಯವಾಗಲಿದೆ. ನಂತರ ಅಧ್ಯಕ್ಷ ಸ್ಥಾನ ನಲಪಾಡ್ ಅವರಿಗೆ ಹಸ್ತಾಂತರವಾಗಬೇಕಿದೆ.ಈ ನಿಮಿತ್ತ ಅವರು ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಲಪಾಡ್ ಔತಣಕೂಟ ಆಯೋಜಿಸಿದ್ದರು. ಸಭೆಯಲ್ಲಿ ಎಲ್ಲಾ ಜಿಲ್ಲೆಯ ಯುವ ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಜಟಾಪಟಿ ನಡೆದಿದೆ ಎಂದು ಹೇಳಲಾಗಿದೆ.
ಅದರಲ್ಲಿ ಭಾಗವಹಿಸಿದ್ದ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡರ ಮೇಲೆ ನಲಪಾಡ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಾನು ಯೂತ್ ಕಾಂಗ್ರೆಸ್ ಅಧ್ಯಕ್ಷನಾಗುತ್ತಿದ್ದೇನೆ. ನೀನು ಬೇರೆಯವರಿಗೆ ಸಪೋರ್ಟ್ ಮಾಡುತ್ತೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ನಲಪಾಡ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ನಲಪಾಡ್ ನಿರಾಕರಣೆ:
ನಾನು ಎಲ್ಲರನ್ನೂ ಸ್ವತಃ ಸಭೆಗೆ ಕರೆದಿದ್ದು, ಅಲ್ಲಿ ಇಂಥ ಯಾವುದೇ ಇಂತಹ ಘಟನೆ ನಡೆದಿಲ್ಲ ಎಂದು ಮೊಹಮ್ಮದ್‌ ನಲಪಾಡ್‌ ಹೇಳಿದ್ದಾರೆ. ನನ್ನ ಮೇಲೆ ಸುಮ್ಮನೆ ಸುಮ್ಮನೆ ಇಂತಹ ಆರೋಪ ಮಾಡುತ್ತಿದ್ದಾರೆ. ನನ್ನ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸಲು ಷಡ್ಯಂತ್ರ ಷಡ್ಯಂತ್ರ ನಡೆಯುತ್ತಿದೆ. ಅಲ್ಲಿ ಅಂಥ ಯಾವುದೇ ಘಟನೆ ನಡೆದಿಲ್ಲ ಎಂದು ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement