1200 ಕೋಟಿ ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

ಬೆಂಗಳೂರು : ಹಾಲಿ ದ್ವಿಪಥದ ಶಿರಾಡಿ ಘಾಟ್ ರಸ್ತೆಯನ್ನು 1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು ಎರಡು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಚತುಷ್ಪಥ ರಸ್ತೆಯಾಗಲಿದೆ.
ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement