ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ತೀವ್ರ ಪ್ರಯತ್ನ ನಡೆಸಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ.
ಈ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ವಾದ್ರಾ ಸುಳಿವು ನೀಡಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಾನು ನಿಮಗೆ ಕಾಣುವುದಿಲ್ಲವೇ ಎಂದು ಹೇಳುವ ಮೂಲಕ ಪ್ರಿಯಾಂಕ ಗಾಂಧಿ ಅವರು ಪರೋಕ್ಷವಾಗಿ ತಾನೇ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ್ದಾರೆ .
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ನಿಮಗೆ ಯಾರಾದರೂ ಮುಖ್ಯಮಂತ್ರಿಗಳು ಅಭ್ಯರ್ಥಿಗಳು ಕಾಣುತ್ತಾರೆಯೇ ಕಂಡರೆ ಹೇಳಿ ಮುಖ್ಯಮಂತ್ರಿಯಾಗಿ ನಾನು ನಿಮಗೆ ಕಾಣಿಸುತ್ತಿಲ್ಲವೆ ಎಂದು ಸುದ್ದಿಗಾರರು ಪ್ರಶ್ನೆಗೆ ಉತ್ತರಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ ಹತ್ತರಿಂದ ಕರತನಕ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಪ್ರಿಯಾಂಕಾ ಗಾಂಧಿ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಕಾಂಗ್ರೆಸ್ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಒಂದುವೇಳೆ ಪ್ರಿಯಾಂಕ ಗಾಂಧಿಯವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತವಾದರೆ ಅವರು ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಇದೇ ವೇಳೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ೨೦ ಲಕ್ಷ ಜನರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ