ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ:ಸಚಿವ ಸುನಿಲಕುಮಾರ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೇಕಾದ ಸಂಪನ್ಮೂಲ ಕ್ರೂಢೀಕರಿಸಲು ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳುವ ಮೂಲಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್‌ಕುಮಾರ್, ವಿದ್ಯುತ್ ದರ ಏರಿಕೆಯ ಸುಳಿವನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಲ್ಲಿ ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಹಾಗಾಗಿ ವಿದ್ಯುತ್ ದರ ಏರಿಕೆ ಮಾಡುವುದು ಅನಿವಾರ್ಯವಾಗಲಿದೆ ಎಂದರು.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಶಿಫಾರಸ್ಸಿನಂತೆ ವಿದ್ಯುತ್ ದರಗಳು ಏರಿಕೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಇಂದಿನ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ. ಇಂಧನ ಇಲಾಖೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬೆಂಗಳೂರು ಜಲಮಂಡಳಿ ಸೇರಿದಂತೆ ಹ ಲವು ಇಲಾಖೆಗಳಿಂದ ೧೨ ಸಾವಿರ ಕೋಟಿ ರೂ ಬಾಕಿ ಇದೆ. ಈ ಹಣವನ್ನು ವಸೂಲಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಸಂಸ್ಕೃತ ವಿವಿಗೆ ವಿರೋಧ ಸರಿಯಲ್ಲ
ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ವಿರೋಧ ಸರಿಯಲ್ಲ. ಸಂಸ್ಕೃತ ಎಲ್ಲ ಭಾಷೆಗಳ ತಾಯಿ.ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ನೀಡಬೇಕು ನಿಜ. ಕನ್ನಡಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು, ಕೊಡುತ್ತೇವೆ. ಮುಂದಿನ ಬಜೆಟ್‌ನಲ್ಲಿ ಕನ್ನಡ ಭಾಷಾ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement