ಸ್ಫೋಟಕ ತುಂಬಿದ್ದ ಟ್ರಕ್ ಬೈಕಿಗೆ ಡಿಕ್ಕಿ: ಸ್ಫೋಟದಿಂದ 17 ಮಂದಿ ಸಾವು

ಆಕ್ರಾ: ಸ್ಫೋಟಕಗಳನ್ನು ಹೊತ್ತ ಟ್ರಕ್ ಬೈಕ್‍ಗೆ ಡಿಕ್ಕಿಯಾದ್ದು, ಭೀಕರ ಸ್ಫೋಟವಾಗಿದ್ದು, ಈ ಅವಘಡದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, 59 ಮಂದಿ ಗಾಯಗೊಂಡ ಘಟನೆ  ಘಾನಾದ ರಾಜಧಾನಿ ಅಕ್ರಾದಿಂದ 300 ಕಿಲೋ ಮೀಟರ್ ದೂರದಲ್ಲಿ ಬೊಗೊಸೊ ಎಂಬ ನಗರದ ಹತ್ತಿರ ಈ ದುರಂತ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಸುತ್ತಮುತ್ತಲ ಹಲವು ಕಟ್ಟಡಗಳಿಗೆ ಹಾನಿಯುಂಟಾಗಿದ್ದು, ಕೆಲವು ನೆಲಕ್ಕುರುಳಿದೆ. ಸ್ಥಳಕ್ಕೆ ಆಗಮಿಸಿದ ರಕ್ಷಣಾ ಪಡೆ ಸಿಬ್ಬಂದಿಗೆ ಬದುಕುಳಿದವರನ್ನು ಹೊರಗೆ ತರುವುದು ಕಷ್ಟಕರವಾಗಿತ್ತು.
ಗಣಿಗಾರಿಕೆ ನಡೆಸುತ್ತಿರುವ ಕಂಪೆನಿಗೆ ಟ್ರಕ್‍ನಲ್ಲಿ ಸ್ಫೋಟಕವನ್ನು ಹೊತ್ತೊಯ್ಯುತ್ತಿರುವಾಗ ಬೈಕ್ ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದೆ. ಗಾಯಗೊಂಡ 59 ಮಂದಿಯಲ್ಲಿ 42 ಮಂದಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಇದುವರೆಗೆ 17 ಮಂದಿ ಮೃತರಾಗಿರುವುದು ದೃಢಪಟ್ಟಿದೆ. ಗಾಯಗೊಂಡ 59 ಮಂದಿಯನ್ನು ಕಾಪಾಡಲಾಗಿದೆ ಎಂದು ಘಾನಾ ಸರ್ಕಾರದ ಮಾಹಿತಿ ಸಚಿವ ಕೊಜೊ ಒಪ್ಪೊಂಗ್ ಕ್ರುಮ ತಿಳಿಸಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement