ಮಹತ್ವದ ನಿರ್ಧಾರ…ಕರ್ನಾಟಕದಲ್ಲಿ ವೀಕೆಂಡ್‌ ಕರ್ಫ್ಯೂ ಎರಡೇ ವಾರಕ್ಕೆ ಅಂತ್ಯ.. ನಾಳೆಯಿಂದ ಇರಲ್ಲ

ಬೆಂಗಳೂರು: ಕೋವಿಡ್‌ ನಿಯಂತ್ರಿಸಲು ಹೇರಿದ್ದ ವಾರಾಂತ್ಯದ ಕರ್ಫ್ಯೂವನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್‌ ಕರ್ಫ್ಯೂ ಅಂತ್ಯಗೊಂಡಿದೆ.
ಇಂದು, ಶುಕ್ರವಾರ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್‌ ಕರ್ಫ್ಯೂ ನಾಳೆಯಿಂದ ಇರುವುದಿಲ್ಲ. ಆದರೆ ನೈಟ್‌ ಕರ್ಫ್ಯೂ ಯಥಾವತ್‌ ಮುಂದುವರಿಯಲಿದೆ ಎಂದು ಸಭೆಯ ಬಳಿಕ ಕಂದಾಯ ಸಚಿವ ಅಶೋಕ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ಅದರ ತೀವ್ರತೆ ಕಡಿಮೆಯಿದೆ. ಈ ಕಾರಣಕ್ಕೆ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಬಿಗಿಕ್ರಮ ಮುಂದುವರಿಸಬಹುದು. ಹೀಗಾಗಿ ವಾರಾಂತ್ಯದ ಕರ್ಫ್ಯೂ ತೆರವು ಮಾಡುವುದು ಉತ್ತಮ ಎಂದು ಕೆಲವು ಸಚಿವರು ಸಲಹೆ ನೀಡಿದ್ದಾರೆ. ಸಚಿವರ ಸಲಹೆ ಮುಖ್ಯಮಂತ್ರಿ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ಐಸಿಯು, ವೆಂಟಿಲೇಟರ್ ನಲ್ಲಿ ರೋಗಿಗಳು ಹೆಚ್ಚು ದಾಖಲಾಗುತ್ತಿಲ್ಲ. ವೀಕೆಂಡ್ ಕರ್ಫ್ಯೂಗೆ ಜನರ ವಿರೋಧವಿದೆ. ಹೀಗಾಗಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ವೀಕೆಂಡ್ ಕರ್ಫ್ಯೂ ಬದಲಿಗೆ ಕಠೀನ ನಿಯಮ ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ.
ವೀಕೆಂಡ್‌ ಕರ್ಫ್ಯೂ ಜಾರಿಗೆ ಬಿಜೆಪಿಯಲ್ಲಿಯೇ ಕೆಲವು ವಿರೋಧ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement