ಉತ್ತರ ಪ್ರದೇಶ ಚುನಾವಣೆ: ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಭಾರತದ ಅತಿ ಎತ್ತರದ ವ್ಯಕ್ತಿ – ಧರ್ಮೇಂದ್ರ ಪ್ರತಾಪ್ ಸಿಂಗ್ – ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷ(SP)ಕ್ಕೆ ಸೇರ್ಪಡೆಗೊಂಡಿದ್ದಾರೆ.
ಸಿಂಗ್ ಅವರನ್ನು ಎಸ್ಪಿಯ ರಾಜ್ಯಾಧ್ಯಕ್ಷ ನರೇಶ್ ಪಟೇಲ್ ಪಕ್ಷಕ್ಕೆ ಸ್ವಾಗತಿಸಿದರು. ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ನಾಯಕರೊಂದಿಗೆ ಧರ್ಮೇಂದ್ರ ಪ್ರತಾಪ್ ಸಿಂಗ್ ಪೋಸ್ ನೀಡಿರುವ ಚಿತ್ರವನ್ನು ಪಕ್ಷ ಪೋಸ್ಟ್ ಮಾಡಿದೆ.
ಪ್ರತಾಪಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಎಸ್‌ಪಿ ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದ ನೀತಿಗಳಲ್ಲಿ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಸಮಾಜವಾದಿ ಪಕ್ಷದ ಸದಸ್ಯತ್ವವನ್ನು ಪಡೆದರು ಎಂದು ಸಮಾಜವಾದಿ ಪಕ್ಷದ ಹೇಳಿಕೆ ತಿಳಿಸಿದೆ.
8 ಅಡಿ 2 ಇಂಚುಗಳಷ್ಟು ಎತ್ತರದ ಧರ್ಮೇಂದ್ರ ಪ್ರತಾಪ್ ಸಿಂಗ್ ಭಾರತದ ಅತಿ ಎತ್ತರದ ವ್ಯಕ್ತಿ. 46 ವರ್ಷ ವಯಸ್ಸಿನ ಅವರು ಗಿನ್ನೆಸ್ ವಿಶ್ವ ದಾಖಲೆಗಳಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ ಮತ್ತು ಏಷ್ಯಾದ ಅತಿ ಎತ್ತರದ ಪುರುಷರಲ್ಲಿ ಒಬ್ಬರಾಗಿದ್ದಾರೆ.
ಸಿಂಗ್ ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ನರಹರ್‌ಪುರ ಕಾಸಿಯಾಹಿ ಗ್ರಾಮದ ನಿವಾಸಿ. ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ. ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಸಂಧಿವಾತ ನೋವಿನಿಂದ ಬಳಲಿದ ನಂತರ 2019 ರಲ್ಲಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷದ ಎಪ್ರಿಲ್‌ನಲ್ಲಿ ಅವರು ಉತ್ತರ ಪ್ರದೇಶ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಸಹವರ್ತಿ ಪರ ಪ್ರಚಾರ ಕೂಡ ಮಾಡಿದ್ದರು.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement