ಕೆಎಸ್‌ಆರ್‌ಟಿಸಿಗೂ ಬರಲಿವೆ ಮೂರು ಎಲೆಕ್ಟ್ರಿಕ್ ಬಸ್‌:ವರದಿ

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮೊದಲ ಎಲೆಕ್ಟ್ರಿಕ್ ಬರಲಿದೆ ಎಂದು ವರದಿಯಾಗಿದೆ.
ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಕೆಎಸ್‌ಆರ್‌ಟಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ ಒಪ್ಪಿಗೆ ಸೂಚಿಸಿದರೆ ಮುಂದಿನ ಮೂರು ತಿಂಗಳಲ್ಲಿ ಉಳಿದ ಬಸ್‌ಗಳು ನಿಗಮಕ್ಕೆ ಸೇರ್ಪಡೆಯಾಗಲಿವೆ’ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.
ಬಸ್‌ಗಳ ನಿರ್ವಹಣೆ, ಚಾರ್ಜಿಂಗ್ ವ್ಯವಸ್ಥೆಯನ್ನು ಗುತ್ತಿಗೆ ಪಡೆದ ಕಂಪನಿ ನೋಡಿಕೊಳ್ಳಲಿದೆ. ಚಾಲಕರನ್ನು ಅದೇ ಕಂಪನಿ ಒದಗಿಸಲಿದ್ದು, ಕೆಎಸ್‌ಆರ್‌ಟಿಸಿಯಿಂದ ನಿರ್ವಾಹಕರನ್ನು ನಿಯೋಜಿಸಲಾಗುತ್ತದೆ. ಪ್ರತಿ ಕಿಲೋ ಮೀಟರ್‌ಗೆ ₹55 ಮೊತ್ತವನ್ನು ಕಂಪನಿಗೆ ಕೆಎಸ್‌ಆರ್‌ಟಿಸಿ ಪಾವತಿಸಲಿದೆ ಎಂದು ಹೇಳಿದರು.
ದಿನಕ್ಕೆ ಕನಿಷ್ಠ 450 ಕಿಲೋ ಮೀಟರ್ ಸಂಚರಿಸಲು ವ್ಯವಸ್ಥೆಯನ್ನು ನಿಗಮ ಮಾಡಿಕೊಡಬೇಕಾಗುತ್ತದೆ. ಅಂದರೆ ನಿಗದಿತ ದೂರ ಸಂಚರಿಸದಿದ್ದರೂ, ದಿನಕ್ಕೆ ₹24,750 ಮೊತ್ತವನ್ನು ಕೆಎಸ್‌ಆರ್‌ಟಿಸಿ ಪಾವತಿಸಬೇಕಾಗುತ್ತದೆ. 450 ಕಿಲೋ ಮೀಟರ್‌ಗಿಂತ ಹೆಚ್ಚು ದೂರ ಕ್ರಮಿಸಿದರೆ ಕಿಲೋ ಮೀಟರ್‌ಗೆ ₹55 ರಂತೆ ಹೆಚ್ಚುವರಿ ಮೊತ್ತ ನೀಡಬೇಕಾಗುತ್ತದೆ. ಈ ಎಲೆಕ್ಟ್ರಿಕ್ ಬಸ್‌ಗಳು 43 ಸೀಟುಗಳನ್ನು ಹೊಂದಿದ್ದು, ಹವಾನಿಯಂತ್ರಿತ ವ್ಯವಸ್ಥೆ ಇರಲಿದೆ ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement