ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಂದು, ಶನಿವಾರ ಸ್ವಲ್ಪ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 42,470 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ 26 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 35,140 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,30,447ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸಕಾರಾತ್ಮಕ ದರ ಶೇ. 19.33ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 17,266 ಮಂದಿಗೆ ಸೋಂಕು ದೃಢಪಟ್ಟಿದೆ. ಆರು ಮಂದಿ ಮೃತಪಟ್ಟಿದ್ದಾರೆ.
ಇಂದು ಒಟ್ಟು 2,19,699 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement