ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಬಸವನಬಾಗೇವಾಡಿ ಕ್ರಾಸ್ ಬಳಿ ನಡೆದಿದೆ.
ತಡರಾತ್ರಿ ಈ ಘಟನೆ ನಡೆದಿದ್ದು, ಅಶೋಕ ದೇಸ್ನೂಯಿ(25), ಲಿಂಬಾರಾಮ ದೇಸ್ನೂಯಿ(35) ಸಜೀವ ದಹನಗೊಂಡವರು ಎಂದು ಗುರುತಿಸಲಾಗಿದೆ. ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಇವರಿಬ್ಬರು ಸಜೀವ ದಹನವಾಗಿದ್ದಾರೆ. ಈ ಘಟನೆಯಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದರಿಂದ ಸಾಲು ಸಾಲಾಗಿದ್ದ ಏಳೆಂಟು ಪ್ಲಾಸ್ಟಿಕ್ ಅಂಗಡಿಗಳ ರಕ್ಷಣೆಯಾಗಿವೆ. ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement