ಬಿಜೆಪಿ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿರುವುದನ್ನು ನಾವು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ: ಡಿಕೆಶಿ

ಬೆಂಗಳೂರು: ಕೆಲ ಸಚಿವರು ಸೇರಿದಂತೆ ಬಿಜೆಪಿ ಮುಖಂಡರು ಡಿ.ಕೆ.ಶಿವಕುಮಾರ ಅವರ ಸಂಪರ್ಕದಲ್ಲಿದ್ದಾರೆ ಎಂಬ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ನಮ್ಮ ಜತೆ ಮಾತನಾಡಿರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಇತರೆ ಪಕ್ಷಗಳ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ಸಿದ್ದರಾಮಯ್ಯನವರ ಜೊತೆ ಯಾರೆಲ್ಲ ಮಾತನಾಡುತ್ತಿದ್ದಾರೆ ಎಂದು ಸಚಿವರನ್ನೇ ಕೇಳಿ. ನಮ್ಮ ಬಳಿ ಯಾರು ಮಾತನಾಡುತ್ತಾರೆ ಎಂದು ಗೌಪ್ಯತೆ ಕಾಪಾಡಿಕೊಳ್ಳುವುದು ಮುಖ್ಯ ಎಂದರು.
ಪ್ರತಿಯೊಬ್ಬ ನಾಯಕರು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವ ಬಗ್ಗೆ ಯೋಚಿಸುತ್ತಾರೆ. ಜನ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಯಾವ ರೀತಿ ಸಂದೇಶ ನೀಡುತ್ತಾರೆ ಎಂಬುದರ ಮೇಲೆ ಅವರು ತಮ್ಮ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ನಾವೇ ಮೇಕೆದಾಟು ಯೋಜನೆ ಮಾಡುತ್ತೇವೆ, ಕಾಂಗ್ರೆಸ್ಸಿನವರಿಗೆ ಅವಕಾಶ ನೀಡುವುದಿಲ್ಲ ಎಂಬ ಸಚಿವ ಸೋಮಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ತಡ ಮಾಡುವುದು ಬೇಡ. ಹೇಗಿದ್ದರೂ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಇದೆ. ಜೊತೆಗೆ ಬಿಜೆಪಿಯ 25 ಸಂಸದರಿದ್ದಾರೆ‌. ಒಂದೇ ದಿನದಲ್ಲಿ ಅನುಮತಿ ಪಡೆಯುವ ಸಾಮರ್ಥ್ಯವಿರುವ ಬಲಿಷ್ಠ ಸರ್ಕಾರವಿದೆ. ಅವರು ಈ ಕೆಲಸ ಮಾಡಲಿ, ಯೋಜನೆಯ ಗುದ್ದಲಿ ಪೂಜೆಗೆ ನಾವು ಕೂಡ ಹೋಗುತ್ತೇವೆ. ಸೋಮಣ್ಣ ಅವರನ್ನು ನಾನೇ ಭವ್ಯವಾಗಿ ಸ್ವಾಗತ ಮಾಡುತ್ತೇನೆ’ ಎಂದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement