ಮೆಕ್ಕೆಜೋಳದ ಲಾರಿ ಪಲ್ಟಿ- ಮೂವರು ಸಾವು, ನಾಲ್ವರಿಗೆ ಗಾಯ

ಹಾವೇರಿ: ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ಬಳಿ ಸಂಭವಿಸಿದೆ.
ಮೃತರು ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲವನ್ನ ಹಂದಿಗನೂರ ಗ್ರಾಮದಿಂದ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಲಾರಿ ಕೆಳಗೆ ಸಿಲುಕಿಕೊಂಡಿದ್ದ ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರ ತೆಗೆದಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುತ್ತಲ ಪಿಎಸ್‍ಐ ಜಗದೀಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement