500 ರೂ. ವಿಷಯಕ್ಕೆ ಜಡೆ ಹಿಡಿದು ಜಗ್ಗಾಡಿ ಹೊಡೆದಾಡಿಕೊಂಡ ನರ್ಸ್-ಆಶಾ ಕಾರ್ಯಕರ್ತೆ..!

ಪಾಟ್ನಾ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ ಬಳಿಕ ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಬಿಹಾರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮುಯಿನ ಲಕ್ಷ್ಮೀಪುರ್ ಬ್ಲಾಕ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ತಲೆಕೂದಲು ಹಿಡಿದುಕೊಂಡು ಎಳೆದಾಡುತ್ತಿದ್ದು, ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಚಪ್ಪಲಿ ಮತ್ತು ಕೈಗಳಿಂದ ಬಡಿದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಭಾನುವಾರ (ಜನವರಿ 23) ಆಶಾ ಕಾರ್ಯಕರ್ತೆ ರಿಂತು ಕುಮಾರಿ ನವಜಾತ ಶಿಶುವಿಗೆ ಬಿಸಿಜಿ (ಕ್ಷಯರೋಗ ತಡೆಗಟ್ಟುವ ಲಸಿಕೆ) ಲಸಿಕೆ ಹಾಕಿಸಲು, ಮಿಡ್ ವೈಫ್ (ಆಯಕ್ಸಿಲರಿ ನರ್ಸ್ ಮಿಡ್ ವೈಫ್) ರಂಜನಾ ಕುಮಾರಿ ಅವರ ಬಳಿ ಕೊಂಡೊಯ್ದಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ನರ್ಸ್ ರಂಜನಾ ಕುಮಾರಿ ಲಸಿಕೆ ನೀಡಲು 500 ರೂಪಾಯಿ ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರಿಂದ ಇಬ್ಬರು ಹೆರಿಗೆ ವಾರ್ಡ್ ಸಮೀಪ ಹೊಡೆದಾಡಿಕೊಳ್ಳಲು ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.
ಈ ಘಟನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇಬ್ಬರು ಆಶಾ ಕಾರ್ಯಕರ್ತೆಯರು ಹೊಡೆದಾಡಿಕೊಳ್ಳುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೊ ವೈರಲ್‌ ಆಗಿದೆ.

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement