ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಜ್ 28ರಿಂದ ಪರೀಕ್ಷೆ ಆರಂಭಗೊಂಡು, ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ.
ಮಹಾಮಾರಿ ಕೊರೊನಾ ನಡುವೆಯೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸುವುದಕ್ಕೆ ಈಗಾಗಲೇ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಸದ್ಯ ಈಗ ಮುಖ್ಯಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಂತೆ ಮಾರ್ಚ್ 28ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 11ರಂದು ಅಂತ್ಯಗೊಳ್ಳಲಿದೆ.

ವೇಳಾಪಟ್ಟಿಗೆ ಅಭ್ಯರ್ಥಿಗಳು/ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆ ಅವಧಿ ಮುಗಿದಿದ್ದು, ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರ ವರೆಗೆ ಪರೀಕ್ಷೆ ನಡೆಯಲಿದೆ. ಭಾಷಾ ಪರೀಕ್ಷೆಯು 100 ಅಂಕಗಳಿಗೆ ಹಾಗೂ ಕೋರ್ ಸಬ್ಜೆಕ್ಟ್ 80 ಅಂಕಗಳಿಗೆ ಇರಲಿದೆ

ಮುಖ್ಯ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ

* 28-03-2022ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲಿಷ್‌ ( ಎನ್ ಸಿಇಆರ್ ಟಿ ), ಸಂಸ್ಕೃತ

*30-03-2022, ಬುಧವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

* 01-04-2022, ಶುಕ್ರವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ

* 04-04-2022 ಸೋಮವಾರ – ಗಣಿತ, ಸಮಾಜ ಶಾಸ್ತ್ರ

* 06-04-2022, ಬುಧವಾರ – ಸಮಾಜ ವಿಜ್ಞಾನ

08-04-2022 ಶುಕ್ರವಾರ ತೃತೀಯ ಭಾಷೆ – ಹಿಂದಿ ( NCERT ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

11-04-2022 ಸೋಮವಾರ – ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement