ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ಮಾವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಸಮೀಪದ ಶಾಲೆಗಳಿಗೆ ರಜೆ ನೀಡಲಾಗಿದೆ.
ಗ್ಯಾಸ್ ಟ್ಯಾಂಕರ್ ಲಾರಿಯಿಂದ ಪ್ರತ್ಯೇಕಗೊಂಡು ಕೆಳಗೆ ಉರುಳಿದೆ. ನಿಂದ ಸ್ವಲ್ಪಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿರುವುದರಿಂದ ಅದರ ವಾಸನೆ ಕಿಮೀಗೂ ದೂರದ ವರೆಗೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆ ಪೂರ್ಣವಾಗುವ ವರೆಗೂ ಸಮೀಪದವರು ಜನರು ಮನೆಯಲ್ಲಿ ಬೆಂಕಿ ಹೊತ್ತಿಸದಂತೆ ಸೂಚನೆ ನೀಡಲಾಗಿದೆ. ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರ್ಯಾಚರಣೆ ಚುರುಕುಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಬಂದ್ ಮಾಡಲಾಗಿದೆ. ಗಿಬ್ ವೃತ್ತದಲ್ಲಿ ಚಂದಾವರ ಮೂಲಕ ಹೊನ್ನಾವರಕ್ಕೆ ತೆರಳಲು ವಾಹನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ ವಿದ್ಯುತ್ ಟ್ರಾನ್ಸ್ಫಾರ್ಮರ್ ಸಹ ಇದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ