ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ- ಟಿ20 ಸರಣಿಗೆ ಭಾರತದ ತಂಡ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದಾರೆ.
ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ ಸ್ಪೋಟಕ ಬ್ಯಾಟರ್ ದೀಪಕ್ ಹೂಡಾ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ ವಿರುದ್ದ ಸರಣಿಗೆ ಆಯ್ಕೆಯಾಗಿದ್ದ ಯುವ ವೇಗಿ ಅವೇಶ್ ಖಾನ್ ಸಹ ಸ್ಥಾನ ಪಡೆದಿದ್ದಾರೆ. ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದ್ದಾರೆ.
ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿರುವ ಉಪನಾಯಕ ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಗಾಯದ ಕಾರಣ ರವಿಚಂದ್ರನ್ ಅಶ್ವಿನ್ ಅವರನ್ನು ಕೂಡ ಆಯ್ಕೆಗಾರರು ಪರಿಗಣಿಸಿಲ್ಲ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ...!

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಏಕದಿನ ಪಂದ್ಯಗಳ ವೇಳಾಪಟ್ಟಿ

6 ಫೆಬ್ರವರಿ: 1ನೇ ODI, ಅಹಮದಾಬಾದ್
ಫೆಬ್ರವರಿ 9: 2ನೇ ODI, ಅಹಮದಾಬಾದ್
ಫೆಬ್ರವರಿ 11: 3ನೇ ODI, ಅಹಮದಾಬಾದ್

 

ಟಿ20 ಪಂದ್ಯಗಳ ವೇಳಾಪಟ್ಟಿ:

16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ

ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ
ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement