ಗುಲಾಂ ನಬಿ ಆಜಾದ್‌ಗೆ ಪದ್ಮ ಪ್ರಶಸ್ತಿ: ಕಾಂಗ್ರೆಸ್‌ನ ಕೆಲ ಮುಖಂಡರಿಂದ ಅಭಿನಂದನೆ…ಆದ್ರೆ ಪಕ್ಷದ ಹೈಕಮಾಂಡ್ ಮೌನ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿನ ಒಡಕನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
ಹಳೆಯ ಪಕ್ಷದ ಹಲವಾರು ನಾಯಕರು ಆಜಾದ್ ಅವರ ಪದ್ಮ ಪ್ರಶಸ್ತಿಯನ್ನು ಶ್ಲಾಘಿಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ವಿಷಯದಲ್ಲಿ ಮೌನ ವಹಿಸಿದೆ.
ಗುಲಾಂ ನಬಿ ಆಜಾದ್ ಅವರ ಕೊಡುಗೆಯನ್ನು ರಾಷ್ಟ್ರ ಗುರುತಿಸುತ್ತಿರುವಾಗ ಕಾಂಗ್ರೆಸ್‌ಗೆ ಅವರ ಸೇವೆಯ ಅಗತ್ಯವಿಲ್ಲ ಎಂಬುದು ವಿಪರ್ಯಾಸ ಎಂದು ಪಕ್ಷದಲ್ಲಿ ಸಂಘಟನಾತ್ಮಕ ಸುಧಾರಣೆಗಳನ್ನು ಬಯಸುತ್ತಿರುವ ಹಿರಿಯ ನಾಯಕ ಮತ್ತು 23ರ ಗುಂಪಿನ ಸದಸ್ಯ ಕಪಿಲ್ ಸಿಬಲ್ ಬೊಟ್ಟು ಮಾಡಿದರು.
ಕಪಿಲ್ ಸಿಬಲ್, “ಗುಲಾಂ ನಬಿ ಆಜಾದ್ ಅವರಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ರಾಷ್ಟ್ರವು ಸಾರ್ವಜನಿಕ ಜೀವನಕ್ಕೆ ಅವರ ಕೊಡುಗೆಗಳನ್ನು ಗುರುತಿಸಿದಾಗ ಕಾಂಗ್ರೆಸ್‌ಗೆ ಅವರ ಸೇವೆಯ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ನೀಡಿದ್ದಕ್ಕೆ ಅಭಿನಂದಿಸಿದ್ದಾರೆ.
ಇದಕ್ಕೆ ವ್ಯತಿರಿಕ್ತವಾಗಿ, ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಆಜಾದ್‌ ಅವರ ಹೆಸರು ಕಾಣಿಸಿಕೊಂಡಿದೆ ಎಂದು ವ್ಯಂಗ್ಯವಾಡಿದರು. ಈ ಬೆಳವಣಿಗೆಯನ್ನು ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ ಬೆಳವಣಿಗೆಯೊಂದಿಗೆ ಜೈರಾಮ್‌ ರಮೇಶ್ ಹೋಲಿಸಿದ್ದಾರೆ. ಟ್ವೀಟ್‌ನಲ್ಲಿ, ಮಾಡುವುದು ಸರಿ. ಅವರು ಗುಲಾಮ್ ಅಲ್ಲ ಆಜಾದ್ ಆಗಲು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಹಿರಿಯ ಸಿಪಿಐ(ಎಂ) ನಾಯಕ ಬುದ್ಧದೇವ್ ಭಟ್ಟಾಚಾರ್ಯ, “ನನಗೆ ಈ ಪ್ರಶಸ್ತಿಯ ಬಗ್ಗೆ ಏನೂ ತಿಳಿದಿಲ್ಲ, ಯಾರೂ ನನಗೆ ಈ ಬಗ್ಗೆ ಏನನ್ನೂ ಹೇಳಿಲ್ಲ, ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ.
ಗೃಹ ವ್ಯವಹಾರಗಳ ಸಚಿವಾಲಯವು (MHA) ಜನವರಿ 25 ರಂದು ಈ ವರ್ಷ ಪದ್ಮ ಪ್ರಶಸ್ತಿಗಳನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಪಟ್ಟಿಯು ನಾಲ್ಕು ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದೆ.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement