ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ ನೇಮಕ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ನೂತನವಾಗಿ ವಿಧಾನ ಪರಿಷತ್ ನಾಯಕ, ಮುಖ್ಯ ಸಚೇತಕ ಮತ್ತು ವಿಧಾನ ಪರಿಷತ್ ಉಪ ನಾಯಕರನ್ನು ನೇಮಿಸಲಾಗಿದೆ.
ಈಗ ಬಿ.ಕೆ.ಹರಿಪ್ರಸಾದ ಅವರನ್ನು ಕಾಂಗ್ರೆಸ್ಸಿನ ವಿಧಾನ ಪರಿಷತ್ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಅವರು, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ್, ಮುಖ್ಯ ಸಚೇತಕರಾಗಿ ಪ್ರಕಾಶ್ ರಾಥೋಡ ಮತ್ತು ಕ ಪರಿಷತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕರಾಗಿ ಕೆ.ಗೋವಿಂದರಾಜ್ ಅವರನ್ನ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಟಿಪ್ಪು ಮತಾಂತರ ಮಾಡಿರುವ ಸತ್ಯವನ್ನೂ ಪಠ್ಯದಲ್ಲಿ ಅಳವಡಿಸಿದ್ದೇವೆ: ಸಚಿವ ಬಿ.ಸಿ. ನಾಗೇಶ
advertisement

ನಿಮ್ಮ ಕಾಮೆಂಟ್ ಬರೆಯಿರಿ