ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ.
ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಆರೋಪಿಗಳಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ರೆಡ್ಡಿ ಆಪ್ತ ಕಾರ್ಯದರ್ಶಿ ಮತ್ತು ದೇವಿ ಎಂಟರ್‌ಪ್ರೈಸಸ್‌ ಪಾಲುದಾರ ಕೆ ಮೆಹಫೂಜ್‌ ಅಲಿ ಖಾನ್‌ ಮತ್ತು ಓಬಳಾಪುರಂ ಮೈನಿಂಗ್‌ ಕಂಪೆನಿ ನಿರ್ದೇಶಕ ಮತ್ತು ಶ್ರೀ ಮಿನರಲ್ಸ್‌ನ ಪಾಲುದಾರ ಬಿ ವಿ ಶ್ರೀನಿವಾಸ ರೆಡ್ಡಿ ಅವರ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ ಕಾಯಿದೆ 1957ರ ಸೆಕ್ಷನ್‌ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು” ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.
2009-10ನೇ ಸಾಲಿನಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ, ಮೆಹಫೂಜ್‌ ಅಲಿ ಖಾನ್‌ ಮತ್ತು ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವರ ಮನೆ, ಸಂಸ್ಥೆ, ಕಚೇರಿಗಳ ಮೇಲೆ ದಾಳಿ ನಡೆಸಿ, ಡಿಜಿಟಲ್‌ ದತ್ತಾಂಶ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣದ ಅದಿರನ್ನು ಹೊರತೆಗೆದು, ಅದನ್ನು ಅಕ್ರಮವಾಗಿ ಸಾಗಿಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿತ್ತು ಎಂದು ವರದಿ ಹೇಳಿದೆ..

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement