ಬೆಂಗಳೂರು ನಗರದಲ್ಲಿ ಮತ್ತೆ ಶಾಲೆ ಆರಂಭ?

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ನಗರದ ಶಾಲೆಗಳು ಮುಂದಿನ ವಾರದಿಂದ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು ಬುಧವಾರ ಮಡಿಕೇರಿಯಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಜ. 29ರಂದು ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ.
ಕೋವಿಡ್ ಸೋಂಕು ಹೆಚ್ಚಿದಂತೆ ಹಲವು ಶಾಲಾ ವಿದ್ಯಾರ್ಥಿಗಳಿಗೂ ಸೋಂಕು ತಗುಲಿತ್ತು. ಅದು ಪಾಲಕರಲ್ಲಿ ಆತಂಕ ಉಂಟುಮಾಡಿತ್ತು. ಬೆಂಗಳೂರು ನಗರದಲ್ಲಿ ಜ. 29ರಂದು ವರೆಗೆ 10ನೇ ತರಗತಿಯಿಂದ ಪಿಯು ಹೊರತು ಪಡಿಸಿ ಎಲ್ಲ ಶಾಲೆಗಳನ್ನು ಮುಚ್ಚಲು ಜ. 21ರಂದು ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ಆರಂಭಿಸಲು ನಿರ್ಧರಿಸಲಾಗಿತ್ತು. ಸೋಂಕು ಪ್ರಕರಣ ವರದಿಯಾದ ಶಾಲೆಗಳನ್ನು ಮಾತ್ರ 3ರಿಂದ 7 ದಿನಗಳ ವರೆಗೆ ತಾತ್ಕಾಲಿಕವಾಗಿ ಮುಚ್ಚಬೇಕು. ಬಳಿಕ ಮತ್ತೆ ಆರಂಭಿಸಬೇಕು ಎಂದು ಸೂಚಿಸಲಾಗಿತ್ತು. ಬೆಂಗಳೂರೇತರ ಜಿಲ್ಲೆಗಳಲ್ಲಿ ಶಾಲೆ ತೆರೆಯುವ ಅಥವಾ ಮುಚ್ಚುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸ್ಥಳೀಯ ಮಟ್ಟದ ಅಧಿಕಾರಿಗಳ ಸಮಿತಿಗೆ ಜವಾಬ್ದಾರಿ ವಹಿಸಲಾಗಿತ್ತು. ಅದರಂತೆ ಬೆಂಗಳೂರು ನಗರ ಹೊರತುಪಡಿಸಿ ಕೋವಿಡ್ ಸೋಂಕು ಹೆಚ್ಚಿರುವ ಧಾರವಾಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ಈಗ ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದರೂ ಅಪಾಯ ಕಡಿಮೆ ಇರುವುದರಿಂದ ಶಾಲೆಗಳನ್ನು ತೆರೆಯುವ ಸಾಧ್ಯತೆಗಳಿವೆ. ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಆಯಾ ಶಾಲೆಗಳನ್ನೇ ಮುಚ್ಚುವ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement