ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ

ಬೆಂಗಳೂರು: ಮುಂದಿನ‌ ತಿಂಗಳು ಫೆ.14ರಿಂದ 25ರ ವರೆಗೆ ವಿಧಾನ ಮಂಡಲ ಅಧೇವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಂಸದರ ಜತೆ ಸಭೆಸುವ ಚಿಂತನೆ ಇದೆ ಎಂದು ಹೇಳಿದರು.
ಇತ್ತೀಚೆಗೆ ಕೋವಿಡ್ -19 ಸೋಂಕಿಗೆ ಒಳಗಾಗಿದ್ದ ಬೊಮ್ಮಾಯಿಯವರು, ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೊನೆಯ ಬಜೆಟ್‌ಗಾಗಿ ಪೂರ್ಣ ಪ್ರಮಾಣದ ಸಭೆಗಳನ್ನು ಪ್ರಾರಂಭಿಸಿಲ್ಲ. ಸಚಿವರು ಬಜೆಟ್ ಬೇಡಿಕೆಗಳನ್ನು ಪಟ್ಟಿ ಮಾಡುತ್ತಿದ್ದಾರೆ. ಕೃಷಿಯೊಂದಿಗೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.
ಕೋವಿಡ್ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಯಮ ಸಡಿಲಿಕೆ ಬಗ್ಗೆ ಬೇರೆ ಬೇರೆ ವಲಯದವರ ಮನವಿ ಕುರಿತು ಚರ್ಚಿಸಲಾಗಿದೆ, ಶಾಲಾ ಕಾಲೇಜುಗಳ ವಿಚಾರವದ ಬಗ್ಗೆ ಸಹ ಚರ್ಚೆ ಮಾಡಿದ್ದೇವೆ. ಎಲ್ಲ ಸಚಿವರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ಸಭೆ ನಡೆಸಿ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ಚುನಾವಣೆ ಯಾವಾಗ ಬಂದರೂ ಯಶಸ್ವಿಯಾಗಿ ನಿಭಾಯಿಸಲು ಸೂಚನೆ ನೀಡಲಾಗಿದ್ದು, ಬೆಂಗಳೂರಿನ ಸಚಿವರ ಜತೆ ಹೊರಗಿನ ಸಚಿವರ ಮೂಲಕವೂ ನಿಭಾಯಿಸಿ ಯಶಸ್ವಿಯಾಗಿ ನಡೆಸುತ್ತೇವೆ. ಅಲ್ಲದೇ, ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳ ಚುನಾವಣೆ ಬಗ್ಗೆಯೂ ಚರ್ಚಿಸಿದ್ದೇವೆ. ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement