ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸಾವು

ಚಾಮರಾಜನಗರ: ಹನೂರು ತಾಲೂಕಿನಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಣೆಗೆ ಹೋಗಿದ್ದ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.
ಮೈಸೂರು ಮೂಲದ ನರ್ಸಿಂಗ್ ವಿದ್ಯಾರ್ಥಿ ಉಮಾಶಂಕರ (19) ಮೃತ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಗುರುವಾರ ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ಅಂಚಿನಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement