ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕಾದರೆ ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಬೇಕು: ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020’ ಅನ್ನು ಜಾರಿಗೊಳಿಸಬೇಕಾದರೆ ರಾಜ್ಯ ಸರ್ಕಾರವು ಪ್ರತಿ ಗ್ರಾಮದಲ್ಲೂ ಗೋಶಾಲೆ ತೆರೆಯಬೇಕಾಗುತ್ತದೆ ಎಂದು ಗುರುವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಹೇಳಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆಯ ಸೆಕ್ಷನ್‌ 19ರ ಅಡಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ” ಎಂದು ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಕೀಲರಾದ ಎಚ್‌. ವಾಣಿ ಅವರು ತಿಳಿಸಿದಾಗ ಆಕ್ಷೇಪಿಸಿದ ಮುಖ್ಯ ನ್ಯಾಯಮೂರ್ತಿ ಅವಸ್ಥಿ ಅವರು “ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ. ಪ್ರತಿ ಗ್ರಾಮಮಟ್ಟದಲ್ಲೂ ಗೋ ಶಾಲೆ ತೆರೆಯಬೇಕು. ಬೇರೆ ರಾಜ್ಯಗಳಿಗೆ ಹೋಗಿ ಪರಿಶೀಲನೆ ಮಾಡಿ. ಅಲ್ಲಿನ ಸರ್ಕಾರಗಳು ಪ್ರತಿಯೊಂದು ಗ್ರಾಮದಲ್ಲಿ ಗೋಶಾಲೆ ಆರಂಭಿಸಿವೆ” ಎಂದರು.
ಗೋಶಾಲೆಗಳನ್ನು ಆರಂಭಿಸಲು ಯಾವ ಮಾರ್ಗಸೂಚಿ ಅನುಸರಿಸಲಾಗಿದೆ? ರಾಜ್ಯದಲ್ಲಿ ಈಗ ಎಷ್ಟು ಗೋಶಾಲೆಗಳಿವೆ? ಅವುಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತಿದೆ? ಭವಿಷ್ಯದಲ್ಲಿ ಎಷ್ಟು ಆರಂಭಿಸಲಾಗುತ್ತದೆ. ಅವುಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತದೆ? ಪ್ರತಿಯೊಂದು ಗೋಶಾಲೆಗೂ ಎಷ್ಟು ಹಣ ಒದಗಿಸಲಾಗುತ್ತದೆ. ಯಾವ ರೀತಿಯ ಮೇವು ಪೂರೈಸಲಾಗುತ್ತಿದೆ? ಒಂದು ಗೋಶಾಲೆಯಲ್ಲಿ ಎಷ್ಟು ಪ್ರಾಣಿಗಳನ್ನು ಇರಿಸಲಾಗುತ್ತದೆ? ಹೀಗೆ ಹಲವು ಅಂಶಗಳ ಮೇಲ್ವಿಚಾರಣೆ ಹಾಗೂ ನಿರ್ವಹಣೆ ಮಾಡಲು ಮಾರ್ಗಸೂಚಿಗಳು ಅಗತ್ಯವಾಗಿರುತ್ತವೆ. ಮಾರ್ಗಸೂಚಿಗಳನ್ನು ಏಕರೂಪವಾಗಿ ಅಳವಡಿಸಿಕೊಂಡಾಗ ಮಾತ್ರ ಗೋಶಾಲೆಗಳನ್ನು ನಿರ್ವಹಣೆ ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.
“ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚಿಸಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ, ಬಿಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ರೂಪಿಸಲಾಗಿದೆಯೇ? ಎಂಬ ಬಗ್ಗೆಯೂ ವಿವರಣೆ ನೀಡಬೇಕು” ಎಂದು ಸಕಾರಕ್ಕೆ ಮೌಖಿಕವಾಗಿ ಸೂಚಿಸಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದರು ಎಂದು ವರದಿ ತಿಳಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಕಾಂತಾರ: ಹೊಂಬಾಳೆ ಫಿಲ್ಮ್ಸ್‌ ವಿರುದ್ಧದ ಎರಡನೇ ಮೊಕದ್ದಮೆ ಹಿಂದಿರುಗಿಸಿದ ಕೇರಳ ಕೋರ್ಟ್; ಈಗ "ವರಾಹರೂಪಂ" ಹಾಡಿನ ಬಳಕೆ ವಿರುದ್ಧ ಯಾವುದೇ ಆದೇಶವಿಲ್ಲ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement