ನವದೆಹಲಿ: ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಅಶಿಸ್ತುತೋರಿದ ಆರೋಪದ ಮೇಲೆ ಒಂದು ವರ್ಷಗಳ ಕಾಲ ವಿಧಾನಸಭೆ ಕಲಾಪದಿಂದ ೧೨ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಕ್ರಮವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
೧೨ ಶಾಸಕರನ್ನು ಒಂದು ವರ್ಷಗಳ ಕಾಲ ಅಮಾನತು ಮಾಡಿರುವ ನಿರ್ಧಾರ ಅಸಾಂವಿಧಾನಿಕ ಮತ್ತು ಅನಿಯಂತ್ರಿತ’ ಎಂದು ಹೇಳಿರುವ ಸುಪ್ರೀಂಕೋರ್ಟ್ ಶಾಸಕರ ಮೇಲೆ ವಿಧಿಸಲಾಗಿದ್ದ ಅಮಾನತನ್ನು ರದ್ದು ಮಾಡಿದೆ.
ಸ್ಪೀಕರ್ ಕೈಗೊಂಡ ನಿರ್ಧಾರದ ವಿರುದ್ಧ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸ್ಪೀಕರ್ ನಿರ್ಧಾರ ಸರಿಯಲ್ಲ ಎಂದು ಹೇಳಿದೆ.
ಮಹಾರಾಷ್ಟ್ರದ ವಿಧಾನಸಭೆಯ ಸ್ಪೀಕರ್ ಕೈಗೊಂಡಿದ್ದ ನಿರ್ಧಾರವನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ಹೇಳಿ ರದ್ದು ಮಾಡಿರುವುದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ವಿಧಾನಸಭೆಯಲ್ಲಿ ಅಶಿಸ್ತು ತೋರಿದ್ದಾರೆ ಎನ್ನುವ ಕಾರಣವನ್ನು ಮುಂದೊಡ್ಡಿ ೨೦೨೧ ಜುಲೈ ೫ ರಿಂದ ಅನ್ವಯವಾಗುವಂತೆ ೧೨ ಬಿಜೆಪಿ ಶಾಸಕರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಒಂದು ವರ್ಷದವರೆಗೆ ಅಮಾನತುಗೊಳಿಸಲಾಗಿತ್ತು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪ್ರತಿಪಕ್ಷಗಳ ಸದಸ್ಯರ ಸಂಖ್ಯೆಯನ್ನು ಕಡಿಮೆ ಮಾಡಲು ಹುನ್ನಾರ ನಡೆಸಿದೆ ಎಂದು ಬಿಜೆಪಿ ಆರೋಪಿಸಿತ್ತು.
ಬಿಜೆಪಿಯ ೧೨ ಶಾಸಕರಾದ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಳಕರ್, ಪರಾಗ್ ಅಲವಾನಿ, ಹರೀಶ್ ಪಿಂಪಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ ಅವರನ್ನು ಅಮಾನತು ಮಾಡಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ