ರಾಜ್ಯ ಸರ್ಕಾರದಿಂದ ನೂತನ ಕೋವಿಡ್ ಮಾರ್ಗಸೂಚಿ ಪ್ರಕಟ: ಜನವರಿ 31ರಿಂದ ನೈಟ್‌ ಕರ್ಫ್ಯೂ ಇಲ್ಲ-ಯಾವುದಕ್ಕೆ ಅನುಮತಿ-ಯಾವುದಕ್ಕೆ ಇಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ಜನವರಿ 31 ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ, ಬೆಂಗಳೂರಿನ ಎಲ್ಲಾ ಶಾಲೆಗಳು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸೋಮವಾರದಿಂದ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ಸರ್ಕಾರದ ಮುಂದೆ ಮಂಡಿಸಿದ ಮಾಹಿತಿ ಮತ್ತು ಪ್ರವೃತ್ತಿಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಕುರಿತು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನೂತನ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಈ ಮಾರ್ಗಸೂಚಿಯಂತೆ ದಿನಾಂಕ 31-01-2022ರಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಜಾರಿಯಲ್ಲಿದ್ದ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿದ್ದ ರಾತ್ರಿ ಕರ್ಫ್ಯೂವನ್ನು ರದ್ದುಗೊಳಿಸಲಾಗಿತ್ತಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1 ರಿಂದ 9 ನೇ ತರಗತಿಯ ಶಾಲೆಗಳು ಸೋಮವಾರದಿಂದ ಪ್ರಾರಂಭವಾಗಬಹುದು. ಬೆಂಗಳೂರಿನಲ್ಲಿ ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳನ್ನು ದಿನಾಂಕ 31-01-2022ರಿಂದ ಪುನರಾರಂಭಿಸೋದಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೆಲ್ ಸೇರಿದಂತೆ ಇತರೆ ಊಟದ ಸ್ಥಳಗಳಲ್ಲಿ ಶೇ.50ರ ಮಿತಿ ಹಿಂಪಡೆಯಲಾಗಿದ್ದು, ಪಡೆಯಲಾಗಿದ್ದು, ಶೇ.100ರಷ್ಟು ಜನರ ಮಿತಿಗೆ ಅವಕಾಶ ನೀಡಲಾಗಿದೆ. ಆದರೆ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ, ಕೋವಿಡ್ ನಿಯಂತ್ರಣ ಕ್ರಮ ಅನುಸರಿಸುವಂತೆ ಸೂಚಿಸಲಾಗಿದೆ.
ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮಂದಿರ, ಆಡಿಟೋರಿಯಂ ಹಾಗೂ ಸೆಮಿನಾರ್ ಸ್ಥಳಗಳಲ್ಲಿ ಈ ಹಿಂದಿನ ಶೇ.50ರ ಜನರ ಮಿತಿಯ ನಿರ್ಬಂಧ ಮುಂದುವರಿಸಲಾಗಿದೆ. ಜೊತೆಗೆ ಸಂಪೂರ್ಣ ಲಸಿಕೆ ಪಡೆದಂತವರಿಗೆ ಮಾತ್ರವೇ ಈ ಸ್ಥಳಗಳಲ್ಲಿ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ತಿಳಿಸಿದ್ದಾರೆ.
ಅಲ್ಲದೆ, ಹೋಟೆಲ್‌ಗಳು, ಬಾರ್‌ಗಳು ಮತ್ತು ಪಬ್‌ಗಳು ಶೇಕಡಾ 50 ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ಹೊರಾಂಗಣ ವಿವಾಹಗಳಲ್ಲಿ 300 ಜನರಿಗೆ ಅವಕಾಶ ನೀಡಲಾಗುತ್ತದೆ, ಆದರೆ ಒಳಾಂಗಣ ವಿವಾಹಗಳಿಗೆ 200 ಸದಸ್ಯರಿಗೆ ಅನುಮತಿಸಲಾಗಿದೆ.
ಎಲ್ಲಾ ಸರ್ಕಾರಿ ಕಚೇರಿ, ಸಚಿವಾಲಯಗಳು ದಿನಾಂಕ 31-01-2022ರಿಂದ ಶೇ.100ರ ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ದರ್ಶನ, ಸೇವೆಗೂ ಅವಕಾಶ ನೀಡಲಾಗಿದೆ. ಸಂಪೂರ್ಣವಾಗಿ ಲಸಿಕೆ ಪಡೆದ ಕೇವಲ 50 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಎಲ್ಲಾ ರ್ಯಾಲಿ ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ. ಸ್ವಿಮ್ಮಿಂಗ್ ಪೂಲ್, ಜಿಮ್ ಗಳಲ್ಲಿ ಶೇ.50ರ ಮಿತಿ ಹೇರಲಾಗಿದೆ. ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಟೇಡಿಯಂಗಳಲ್ಲಿ ಶೇ.50ರ ಮಿತಿಯನ್ನು ಮುಂದುವರಿಸಲಾಗಿದೆ.
ಈ ಆದೇಶ ದಿನಾಂಕ 31-01-2022ರಿಂದ 15-02-2022ರ ವರೆಗೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.
ಮಹಾರಾಷ್ಟ್ರ, ಗೋವಾ, ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ನೀಡಬೇಕು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement