ಗೋಮಾಳ ಜಮೀನು ಮಂಜೂರಾತಿ ನೀತಿ ರೂಪಣೆಗೆ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆ ಕುರಿತು ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಸಚಿವ ಆರ್. ಅಶೋಕ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ ಸಚಿವ ಭೈರತಿ, ಪಶು ಸಂಗೋಪನೆ ಖಾತೆ ಸಚಿವ ಪ್ರಭು ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ.
ಗೋಮಾಳ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಈ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement