ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಮಾಡುವಂತೆ ಉಸ್ತುವಾರಿಗಾಗಿ ನೇಮಕಗೊಂಡ ಉಪಸಮಿತಿ ಗುರುವಾರ ಸಭೆ ಸೇರಿ ನಿರ್ದೇಶನ ನೀಡಿತು.
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಸದಸ್ಯರಾಗಿದ್ದಾರೆ.
ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು. ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕೆಂದು ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು. ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದ್ದು, ಇದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು.ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement