ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹಾಗೂ ವಿಪಕ್ಷದ ಉಪನಾಯಕರಾಗಿ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅಲ್ಪಸಂಖ್ಯಾತರು ಕಾಂಗ್ರೆಸ್ಸಿಗೆ ಗೇಣಿದಾರರು, ಆದರೆ ಯಾರಿಗೂ ಸ್ಥಾನಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಖಾದರ್ ಅವರನ್ನು ಎಐಸಿಸಿ ನೇಮಕ ಮಾಡಿದೆ.
ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದು, ಪರಿಷತ್ ನಲ್ಲಿ ಬಿ.ಕೆ.ಹರಿಪ್ರಸಾದ್ ಅವರನ್ನು ವಿಪಕ್ಷ ನಾಯಕನನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿತ್ತು. ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದ್ದ ಕಾಂಗ್ರೆಸ್ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕ ಖಾದರ್ ಅವರಿಗೆ ಆದ್ಯತೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ