ಲಕ್ನೋ : ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರ ಪುತ್ರಿ ಹಾಗೂ ಬಿಜೆಪಿ ಸಂಸದೆ ಸಂಘಮಿತ್ರ ಮೌರ್ಯ, ನಾನು ಬಿಜೆಪಿಯನ್ನು ತ್ಯಜಿಸುವುದಿಲ್ಲ ಆದರೆ ತನ್ನ ತಂದೆಯ ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಡೌನ್ನಿಂದ ಮೊದಲ ಬಾರಿಗೆ ಬಿಜೆಪಿಯಿಂದ ಸಂಸದರಾಗಿರುವ ಸಂಘಮಿತ್ರ ಮೌರ್ಯ ಅವರು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, ನನ್ನ ತಂದೆ ಈ ಪಕ್ಷ ಬಿಡುವ ನಿರ್ಧಾರ ತೆಗೆದುಕೊಳ್ಳುವ ಮೊದಲು ತನ್ನೊಂದಿಗೆ ಚರ್ಚಿಸಿಲ್ಲ. ಆದರೆ ನನ್ನ ಮೇಲೆ ಬಿಜೆಪಿ ತೊರೆಯುವಂತೆ ಯಾವುದೇ ಒತ್ತಡವನ್ನೂ ಹೇರಿಲ್ಲ, ನಾನು ಬಿಜೆಪಿಯೊಂದಿಗೆ ಇದ್ದೇನೆ ಮತ್ತು ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕುಟುಂಬ ಜೀವನ ಮತ್ತು ರಾಜಕೀಯ ಜೀವನ ಸಂಪೂರ್ಣವಾಗಿ ಬೇರೆಬೇರೆ. ನಾನು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ ನನ್ನ ತಂದೆ ವಿರುದ್ಧ ಮಾತ್ರ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರದ ಮಂತ್ರಿ ಯಾಗಿದ್ದ ಪ್ರಭಾವಿ ರಾಜ್ಯ ನಾಯಕರಲ್ಲಿ ಒಬ್ಬರಾದ ಮೌರ್ಯ ಅವರು ಇತ್ತೀಚೆಗೆ ಬಿಜೆಪಿ ಬಿಟ್ಟು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕಡ ಸೇರಿದ್ದರು. ಸಂಘಮಿತ್ರ ಮೌರ್ಯ 2019 ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಅವರನ್ನು ಸೋಲಿಸಿ ಆಯ್ಕೆಯಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ