ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62 ವರ್ಷಕ್ಕೆ ಏರಿಕೆಗೆ ಸುಗ್ರೀವಾಜ್ಞೆ

ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಸೋಮವಾರ, ಜನವರಿ 1, 2022 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆ ಹೊರಡಿಸಿದೆ. ಜೂನ್ 2014ರಲ್ಲಿ, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಬದಲಾವಣೆ ಮಾಡಿತ್ತು ಹಾಗೂ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 58 ರಿಂದ 60ಕ್ಕೆ ಏರಿಸಿತ್ತು.
ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸದ ಸರ್ಕಾರಿ ನೌಕರರು ಸೇರಿದಂತೆ ಹಲವರಿಗೆ ಈ ಕ್ರಮ ಅಚ್ಚರಿ ಮೂಡಿಸಿದೆ. ನಿರ್ಧಾರವು ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು
ನಿವೃತ್ತಿ ಪ್ರಯೋಜನಗಳು ರಾಜ್ಯ ಸರ್ಕಾರದ ವೆಚ್ಚದ ಪ್ರಮುಖ ಭಾಗವಾಗಿದೆ ಮತ್ತು ಆಂಗ್ಲ ದಿನಪತ್ರಿಕೆಯ ವರದಿಯ ಪ್ರಕಾರ, ನಿರ್ಧಾರವು ಸರ್ಕಾರಿ ಸಿಬ್ಬಂದಿಗಳ ನಿವೃತ್ತಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸುತ್ತದೆ, ಹೀಗಾಗಿ ಅವರ ಪಿಂಚಣಿ ಮತ್ತು ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement