ಬೆಂಗಳೂರು: ಜೆಡಿಎಸ್ನಿಂದ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ.
ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದರು. ಶಿ
ಮಂಡ್ಯ ಜಿಲ್ಲೆಯ ದಿವಂಗತ ನಾಯಕರು ಹಾಗೂ ಒಕ್ಕಲಿಗ ಸಮುದಾಯದ ಹಿರಿಯರೂ ಆಗಿದ್ದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಲೋಕಸಭೆಯ ಮಾಜಿ ಸದಸ್ಯ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಅನುಮತಿ ಪಡೆಯಲಾಗಿದ್ದು, ಶಿವರಾಮೇಗೌಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಸೂಚಿಸಲಾಗಿದೆ ಎಂದು ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ಇಡೀ ರಾಜ್ಯವೇ ಗೌರವಿಸುತ್ತಿದ್ದ ಜಿ. ಮಾದೇಗೌಡರಂಥ ಹಿರಿಯರ ಬಗ್ಗೆ ಶಿವರಾಮೇಗೌಡರು ಅಸಭ್ಯವಾಗಿ ಮಾತನಾಡಿರುವುದು ಅಕ್ಷ್ಯಮ್ಯ. ಮಾದೇಗೌಡರ ಬಗ್ಗೆ ಅವರು ಮಾತನಾಡಿರುವ ಆಡಿಯೋ ನಾನೂ ಕಳಿದ್ದೇನೆ. ಇಂಥ ನಡವಳಿಕೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದರು.
ಪದೇ ಪದೆ ಶಿವರಾಮೇಗೌಡರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಅವರು ತಿದ್ದಿಕೊಳ್ಳುತ್ತಾರೆ ಎಂದು ಸುಮ್ಮನಿದ್ದೆವು. ಎಲ್ಲದಕ್ಕೂ ಒಂದು ಇತಿಮಿತಿ ಇದೆ ಎಂದು ಅವರು ಹೇಳಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ