ಪಂಜಾಬ್ ಚುನಾವಣೆ 2022: ಪಂಜಾಬ್‌ ಸಿಎಂ ಚರಣಜಿತ್ ಸಿಂಗ್ ಚನ್ನಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ

ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ ಮತ್ತು ಬದೌರ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಣಕ್ಕಿಳಿಸಿದೆ.
ಚನ್ನಿ ಅವರನ್ನು ಅವರ ಸಾಂಪ್ರದಾಯಿಕ ಚಮಕೌರ್ ಸಾಹಿಬ್ ಸ್ಥಾನದಿಂದ ಪಕ್ಷದ ಅಭ್ಯರ್ಥಿಯಾಗಿ ಈಗಾಗಲೇ ಹೆಸರಿಸಲಾಗಿದೆ ಎಂಬುದು ಗಮನಾರ್ಹ. ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ, ಕಾಂಗ್ರೆಸ್‌ ಪಕ್ಷವು ಪಟಿಯಾಲ ವಿಧಾನಸಭಾ ಕ್ಷೇತ್ರದಿಂದ ಮಾಜಿ ಪಟಿಯಾಲ ಮೇಯರ್ ವಿಷ್ಣು ಶರ್ಮಾ ಅವರನ್ನು ಕಣಕ್ಕಿಳಿಸಿದೆ, ಅಲ್ಲಿ ಅವರು ಪಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಎದುರಿಸಲಿದ್ದಾರೆ. ವಿಷ್ಣು ಶರ್ಮಾ ಅವರನ್ನು ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿಯ ಅಮರಿಂದರ್ ಸಿಂಗ್ ಆಪ್ತ ಎಂದು ಪರಿಗಣಿಸಲಾಗಿತ್ತು.
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಜಗಳದ ನಂತರ, ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದು ಪಂಜಾಬ್ ಲೋಕ ಕಾಂಗ್ರೆಸ್ ಎಂಬ ತಮ್ಮದೇ ಆದ ರಾಜಕೀಯ ಪಕ್ಷವನ್ನು ಸ್ಥಾಪಿಸಿದರು.
ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ದಿಂಡ್ಸಾ ಅವರ ಶಿರೋಮಣಿ ಅಕಾಲಿದಳ ಸಂಯುಕ್ತ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಎಎಪಿ, ಎಸ್‌ಎಡಿ-ಬಿಎಸ್‌ಪಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಪಂಜಾಬ್‌ನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಪ್ರಮುಖ ಸುದ್ದಿ :-   ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement