ಅಕ್ರಮ ಗಣಿಗಾರಿಕೆ ವೇಳೆ ಗುಡ್ಡ ಕುಸಿತ..6 ಕಾರ್ಮಿಕರ ಸಾವು, ಕೆಲವರ ಸ್ಥಿತಿ ಗಂಭೀರ

ಧನ್​ಬಾದ್​(ಜಾರ್ಖಂಡ್​): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಧನ್​ಬಾದ್​ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಧನ್​ಬಾದ್​​ನ ಗೋಪಿನಾಥಪುರದಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಕೆಲಸ ಮಾಡುವ ವೇಳೆ ಏಕಾಏಕಿ ಗುಡ್ಡ ಕುಸಿತವಾಗಿ ಕಾರ್ಮಿಕರು ಅದರೊಳಗೆ ಸಿಲುಕಿ ಮೃತಪಟ್ಟಿಪ್ಪಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಅನೇಕ ಕಾರ್ಮಿಕರು ಕುಸಿತದ ಅಡಿಗೆ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ಈಗಾಗಲೇ ಓರ್ವ ಮಹಿಳೆಯನ್ನು ಜೀವಂತವಾಗಿ ಹೊರತೆಗೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಜಿಲ್ಲಾಡಳಿತ, ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಉಪಸ್ಥಿತರಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಲ್ಲಿದ್ದಲು ಪ್ರದೇಶದಲ್ಲಿ ನೀರು ನಿಂತುಕೊಂಡಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ದುರ್ಘಟನೆ ನಡೆದ ಸ್ಥಳಕ್ಕೆ ಶಾಸಕಿ ಅಪರ್ಣಾ ಸೇನ್​ಗುಪ್ತ ಭೇಟಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement