ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಣೆ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶ ನಿರಾಕರಿಸಿತ್ತು. ಆದರೆ, ಇಂದು, ಮಂಗಳವಾರ ಕಾಲೇಜಿನ ಆಡಳಿತ ಮಂಡಳಿಯ ಆದೇಶ ಧಿಕ್ಕರಿಸಿ ಹಿಜಾಬ್​ ಧರಿಸಿ ಕ್ಯಾಂಪಸ್​​ಗೆ ಬಂದ ವಿದ್ಯಾರ್ಥಿನಿಯರು ತರಗತಿಗೆ ಹೋಗುವ ಬೇಡಿಕೆ ಇಟ್ಟಿದ್ದಾರೆ. ಆದರೆ ಕಾಲೇಜಿನ ಪ್ರಾಂಶುಪಾಲರು ಮಾತ್ರ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶ ನಿರಾಕರಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದು ನಮ್ಮ ಸಾಂವಿಧಾನಿಕ ಹಕ್ಕಾಗಿದ್ದು, ನಾವು ಕಾಲೇಜಿಗೆ ಹಿಜಾಬ್ ಧರಿಸಿಯೇ ತರಗತಿಗೆ ಪ್ರವೇಶಿಸುತ್ತೇವೆ ಎಂದು ತಿಳಿಸಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರು ನಮ್ಮನ್ನು ಪ್ರವೇಶಿಸದಂತೆ ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮಂಗಳವಾರ ತರಗತಿಯಿಂದ ಹೊರಗೆ ಕಳುಹಿಸಲಾಗಿದೆ ಎನ್ನಲಾಗಿದೆ.
ಈಗ ಹಿಜಾಬ್ ಹಕ್ಕಿನ‌ ಕುರಿತು ವಿದ್ಯಾರ್ಥಿನಿಯೋರ್ವಳು ಹೈಕೋರ್ಟ್​ ಮೆಟ್ಟಿಲೇರಿದ್ದಾಳೆ. ಹಿಜಾಬ್ ಧರಿಸುವುದು​ ನಮ್ಮ ಮೂಲಭೂತ ಹಕ್ಕು ಎಂದು ಕೋರ್ಟ್ ಮೊರೆ ಹೋಗಿದ್ದಾಳೆ. ಕಾಲೇಜಿಗೆ ಪೊಲೀಸ್​ ಇಲಾಖೆಯಿಂದ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement