ಗಮನಿಸಿ…ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು (Model Question Papers) ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

ಟ್ವಿಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, “2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳು ಅಧಿಕೃತ ವೆಬ್‌ಸೈಟ್ʼನಲ್ಲಿ ಬಿಡುಗಡೆ ಮಾಡಲಾಗಿದ್ದು, https://pue.kar.nic.in ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಲಿದೆ.
ವಿದ್ಯಾರ್ಥಿಗಳಿಗೆ ಈ ಬಗ್ಗೆ ಆಕ್ಷೇಪಣೆಗಳಿದ್ರೆ, ಫೆಬ್ರವರಿ 5 ರಂದು ಅಥವಾ ಅದಕ್ಕೂ ಮೊದಲು ಇಮೇಲ್ ಐಡಿ [email protected] ಮೂಲಕ ಸಲ್ಲಿಸಬಹುದಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement