ರೇಷ್ಮೆ ಗೂಡಿಗೆ ದಾಖಲೆ ಬೆಲೆ..: ಒಂದು ಕೆಜಿ ರೇಷ್ಮೆಗೂಡು 1043 ರೂ.ಗಳಿಗೆ ಮಾರಾಟ..!

ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಅಂಕೆಗಳಿಗೆ ತಲುಪಿದೆ..! ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂ.ಗಳಿಗೆ ಮಾರಾಟವಾಗಿದೆ.
ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆ ಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021 ಸಾಲಿನ ನವೆಂಬರ್- ಡಿಸೆಂಬರ್ ತಿಂಗಳಿನಲ್ಲಿ 700-800 ರೂ.ನಷ್ಟಿತ್ತು. ಆದರೆ ಬುಧವಾರ 1043 ರೂ.ಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಇದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಲ್ಲಿದ್ದು, ಒಂದು ಕೆಜಿ ರೇಷ್ಮೆಗೂಡಿನ ಒಂದು ಸಾವಿರ ರೂಪಾಯಿ ಗಡಿದಾಟಿದೆ ಎಂದು ಹೇಳಿದ್ದಾರೆ.
ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ, ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳಕ್ಕೆ ಬ್ರೇಕ್, ರೇಷ್ಮೆಗೂಡು ಕದಿಯುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ, ಇ- ಪೆಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ಹಲವಾರು ಕ್ರಮಗಳ ಪರಿಣಾಮವಾಗಿ ದಾಖಲೆ ದರಕ್ಕೆ ರೇಷ್ಮೆ ಗೂಡು ಮಾರಾಟವಾಗಿದ್ದು, ರೈತರಿಗೆ ನೈಜ ಬೆಲೆ ಸಿಗಲು ಕಾರಣವಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement