ಕಾರು-ಟ್ರಕ್‌ ಡಿಕ್ಕಿ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ

ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅಪಘಾತ ನಡೆದಿದ್ದು, ಮೃತರನ್ನು ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಎಂದು ಗುರುತಿಸಲಾಗಿದೆ. ಇವರು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.
ನಾಲ್ವರು ವಿದ್ಯಾರ್ಥಿಗಳು ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮೌಳೇಶ್ವರ ರೆಡ್ಡಿ ತೀವ್ರಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರೆ ತೇಜಸ್ ಮೂಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement