ಕಂದಾಯ ದಾಖಲೆಗಳನ್ನು ಕೂಡಲೇ ಮನೆ ಬಾಗಿಲಿಗೆ ತಲುಪಿಸಿ: ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ

posted in: ರಾಜ್ಯ | 0

ಬೆಂಗಳೂರು: ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಅದನ್ನು ತಕ್ಷಣವೇ ತಲುಪಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ಕುರಿತು ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ. ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದ್ದು, ಈ ಯೋಜನೆಯಡಿ ಕಂದಾಯ ದಾಖಲೆಗಳನ್ನು ಮುದ್ರಿಸಿ, ಒಂದು ಪ್ಲಾಸ್ಟಿಕ್ ಲಕೋಟೆಯಲ್ಲಿ ಇರಿಸಿ, ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಲ್ಪಾವಧಿ ಟೆಂಡರ್ ಕರೆಯುವ ಮೂಲಕ ಮುದ್ರಣದಾರರನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಅದರಂತೆ ಪಿಡಿಎಫ್ ನಮೂನೆಯಲ್ಲಿ ಕಂದಾಯ ದಾಖಲೆಗಳನ್ನು ಮುದ್ರಿಸಲು ಕುಟುಂಬವಾರು ಮತ್ತು ಗ್ರಾಮವಾರು ಮಾಹಿತಿ ನೀಡಲಾಗುತ್ತಿದ್ದು, ಅದರಂತೆ ಕ್ರಮ ಕೈಗೊಳ್ಳುವುದು ಎಂದು ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳು ತುರ್ತಾಗಿ, ಟೆಂಡರ್ ಮೂಲಕ ಆಯ್ಕೆ ಮಾಡಿ ಕಾರ್ಯಾದೇಶ ನೀಡಿರುವ ಮುದ್ರಣದಾರರಿಗೆ ಮುದ್ರಣ ಕಾರ್ಯವನ್ನು ತಕ್ಷಣದಿಂದ ಪ್ರಾರಂಭಿಸಿ, ದಿನಾಂಕ 07-02-2022ರ ಒಳಗಡೆ ಪೂರ್ಣಗೊಳಿಸುವಂತೆ ಸೂಚಿಸಬೇಕು ಹಾಗೂ ಮುದ್ರಿತ ದಾಖಲೆಗಳನ್ನು ದಿನಾಂಕ 08-02-2022ರೊಳಗೆ ಮುದ್ರಣದಾರರು ಸರಬರಾಜು ಮಾಡತಕ್ಕದ್ದು ಎಂದು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement