ಗೇಟ್‌ 2022 ಪರೀಕ್ಷೆ ಮುಂದೂಡುವ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸ್ನಾತಕೋತ್ತರ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು ನಡೆಸಲಾಗುವ ಗೇಟ್‌ -2022 ಪರೀಕ್ಷೆ ಮುಂದೂಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಮನವಿಗಳನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ.
ಇದು ಸರ್ಕಾರದ ನೀತಿನಿರೂಪಣೆಯ ಭಾಗವಾಗಿದ್ದು ಸರ್ಕಾರದ ಪ್ರಾಧಿಕಾರಿಗಳು ಈ ಬಗ್ಗೆ ನಿರ್ಧಾರ ಮಾಡಬೇಕು. ಇದರಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಮಾಡಿದರೆ ಗೊಂದಲಕ್ಕೆ ಕಾರಣವಾಗಲಿದೆ ಎಂದು ನ್ಯಾ. ಡಿ ವೈ ಚಂದ್ರಚೂಡ್‌, ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ವಿಕ್ರಂನಾಥ್‌ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಗೇಟ್‌ ಪರೀಕ್ಷೆಗಳು ಫೆ. 5ರಿಂದ ಆರಂಭವಾಗಲಿದ್ದು ಅದಕ್ಕಿಂತ ಕೇವಲ 48 ಗಂಟೆಗಳ ಮೊದಲು ಪರೀಕ್ಷೆಯನ್ನು ಮುಂದೂಡಲು ಮನವಿ ಮಾಡಿರುವುದು ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಲಿದೆ. ಈ ನ್ಯಾಯಾಲಯವು ಪ್ರಾಧಿಕಾರದ ಅಧಿಕಾರವನ್ನು ಸಂವಿಧಾನ 32ನೇ ವಿಧಿಯಡಿ ಏಕೆ ಆಕ್ರಮಿಸಬೇಕು ಎನ್ನುವುದಕ್ಕೆ ವ್ಯಾಪಕ ಕಾರಣಗಳು ಇಲ್ಲ ಎಂದು ಪೀಠ ಹೇಳಿದೆ.
ಗೇಟ್‌ 2022 ಪರೀಕ್ಷೆಗಳು ಇದೇ ಫೆಬ್ರವರಿ 5, 6, 12 ಮತ್ತು 13ರಂದು ಭೌತಿಕವಾಗಿ ನಡೆಯಲಿವೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement